ನವದೆಹಲಿ: ಭಾರತ ಬಾಕ್ಸಿಂಗ್ ಫೆಡರೇಷನ್ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಡಿ.18ರಂದು ನಡೆಯಲಿದೆ. ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಚುನಾವಣೆ ವಿಳಂಬವಾಗಿತ್ತು. ಗುರುಗ್ರಾಮದಲ್ಲಿ ನಡೆಯುವ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಮತದಾನದ ಕುರಿತು ಅಧಿಸೂಚನೆ ಹೊರಡಿಸಲಾಗಿದೆ’ ಎಂದು ಬಿಎಫ್ಐ ಪ್ರಧಾನ ಕಾರ್ಯದರ್ಶಿ ಜಾಯ್ ಕೊವ್ಲಿ ಹೇಳಿದ್ದಾರೆ. ಡಿ. 2ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ‘ಸೆಪ್ಟೆಂಬರ್ನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಕೋವಿಡ್ ಕಾರಣದಿಂದಾಗಿ ಮುಂದೂಡಲಾಗಿತ್ತು’ ಎಂದು ಕೊವ್ಲಿ ತಿಳಿಸಿ ದ್ದಾರೆ. ಸ್ಪೈಸ್ಜೆಟ್ ಕಂಪನಿಯ ಮಾಲೀಕ ಅಜಯ್ ಸಿಂಗ್ ಅವರು ಬಿಎಫ್ಐ ಅಧ್ಯಕ್ಷರಾಗಿದ್ದಾರೆ. 2016ರಲ್ಲಿ […]