Thursday, 19th September 2024

Delhi Shootout

Delhi Shootout: ರಾತ್ರೋರಾತ್ರಿ ಶೂಟೌಟ್‌; ಆಫ್ಘನ್‌ ಮೂಲದ ಜಿಮ್‌ ಓನರ್‌ ಬಲಿ- ಬಿಷ್ಣೋಯ್‌ ಗ್ಯಾಂಗ್‌ನಿಂದ ಕೃತ್ಯ

Delhi Shootout: ಅಫ್ಘಾನಿಸ್ತಾನ ಮೂಲದ ಮತ್ತು ಸಿಆರ್ ಪಾರ್ಕ್‌ನಲ್ಲಿ ನೆಲೆಸಿದ್ದ ನಾದಿರ್ ಶಾ ಎಂಬಾತ ಮೃತ ದುರ್ದೈವಿಯಾಗಿದ್ದು, ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಆತ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ರಾತ್ರಿ 10:45 ರ ಸುಮಾರಿಗೆ ಗುಂಡಿನ ದಾಳಿಯ ಬಗ್ಗೆ ಪೊಲೀಸರಿಗೆ ಕರೆ ಬಂದಿತು. ತಕ್ಷಣ ಸ್ಥಳಕ್ಕೆ ದೌಡಾಯಿಸಿ ನೋಡಿದಾಗ ರಕ್ತದಮಡುವಿನಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಶಾನನ್ನು ಪೊಲೀಸರು ಕಂಡಿದ್ದಾರೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿಗೆ ತಲುಪುವಷ್ಟರಲ್ಲಿ ಆತ ಕೊನೆಯುಸಿರೆಳೆದಿದ್ದ ಎನ್ನಲಾಗಿದೆ.

ಮುಂದೆ ಓದಿ