ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯಕ್ಕೆ 62 ಸಾವಿರ ಕೋಟಿ ನಷ್ಟ ಬೆಂಗಳೂರು: “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಫೆ. 7 ರಂದು ಕರ್ನಾಟಕ ಸರಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ […]