ಪಣಜಿ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಖಾಸಗಿ ದಂತ ವೈದ್ಯರು ಕಪ್ಪುಪಟ್ಟಿ ಧರಿಸಿ, ಪಾಲ್ಗೊಳ್ಳುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು. ಬಿಜೆಪಿಯ ರಾಜ್ಯ ಘಟಕದ ವೈದ್ಯಕೀಯ ವಿಭಾಗ ವೈದ್ಯರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಿತ್ತು. ರಾಜ್ಯ ಸರ್ಕಾರ ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣೆಯ ಶುಲ್ಕವನ್ನು ಹೆಚ್ಚಿಸಿರುವುದನ್ನು ವಿರೋಧಿಸಿದ ಕೆಲ ದಂತವೈದ್ಯರು, ಈ ಸಂವಾದ ಕಾರ್ಯಕ್ರಮದಲ್ಲಿ ಪ್ರತಿಭಟಿಸಿದರು. ಭಾರತೀಯ ದಂತವೈದ್ಯಕೀಯ ಸಂಸ್ಥೆ (ಐಡಿಎ) ಸದಸ್ಯ ಡಾ.ಅನಿಲ್ ಡಿಸಿಲ್ವ, […]