ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಿರಣ್ ಗೆ ನ್ಯಾಯಾ ಲಯವು 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಭಾನುವಾರ ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಚಾಮರಾಜನಗರದಲ್ಲಿ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ಸೋಮವಾರ ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರ ಮುಂದೆ ಪ್ರಕರಣ ಸಂಬಂಧ ಹೆಚ್ಚಿನ […]