ಕರ್ನೂಲ್: ನವರಾತ್ರಿ ಹಬ್ಬದಂದು ನಡೆಯುವ ದೇವರಗಟ್ಟು ಬನ್ನಿ ಉತ್ಸವದ ದಂಡ ಕಾಳಗದಲ್ಲಿ ಮೂವರು ಮೃತಪಟ್ಟಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಈ ಮೆರವಣಿಗೆಯಲ್ಲಿ ಉತ್ಸವ ಮೂರ್ತಿಯನ್ನು ಕೊಂಡೊಯ್ಯುವಾಗ ದಂಡ ಕಾಳಗ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ, ಮೆರವಣಿಯಲ್ಲಿ ಪಾಲ್ಗೊಳ್ಳುವ ನೂರಾರು ಜನರು ದಂಡ ಕಾಳಗದಲ್ಲಿ ಪಾಲ್ಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಮೂವರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳವಾರ ರಾತ್ರಿ ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿಯ ಮದುವೆ […]