ನವದೆಹಲಿ: ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಉತ್ತರಪ್ರದೇಶದ ಧಾಮ್ಪುರ್ ಸಕ್ಕರೆ ಕಾರ್ಖಾ ನೆಯ ನಾಲ್ಕು ಘಟಕಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ₹ 20 ಕೋಟಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ‘ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಉತ್ತರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗಳು ಸಲ್ಲಿಸಿರುವ ವಿವಿಧ ತಪಾಸಣಾ ವರದಿಗಳನ್ನು ಪರಿಶೀಲಿಸಲಾಗಿದ್ದು, ಇದರಲ್ಲಿ ಗಣನೀಯ ಪ್ರಮಾಣದಲ್ಲಿ ನಿರಂತರವಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟ ವಾಗಿದೆ’ ಎಂದು ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ಅವರ ನೇತೃತ್ವದ ಪೀಠ ತಿಳಿಸಿದೆ. […]