ಕೊಲಂಬೊ: ಕಳೆದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಸಂದರ್ಭದಲ್ಲಿ ಆಸ್ಟ್ರೇಲಿಯಾ ಪ್ರವಾಸದ ವೇಳೆ ಲೈಂಗಿಕ ಕಿರುಕುಳದ ಗಂಭೀರ ಆರೋಪದಡಿ ಯಲ್ಲಿ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರು ನಿಷೇಧ ಶಿಕ್ಷೆಗೊಳಗಾಗಿದ್ದರು. ಬಳಿಕ ಪ್ರಕರಣದ ತನಿಖೆ ನಡೆದು ಈ ಆರೋಪದಿಂದ ಗುಣತಿಲಕರನ್ನು ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನ ಜಿಲ್ಲಾ ನ್ಯಾಯಾಲಯ ಖುಲಾಸೆ ಗೊಳಿಸಿದೆ. ಇದೀಗ ಶ್ರೀಲಂಕಾ ಕ್ರಿಕೆಟ್ ಮಂಡಳಿ (ಎಸ್‌ಎಲ್‌ಸಿ) ನಿಷೇಧ ತೆರವುಗೊಳಿಸಿದೆ. ಗುಣತಿಲಕ ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ನಮೀಬಿಯಾ ವಿರುದ್ಧದ ಒಂದು ಪಂದ್ಯದಲ್ಲಿ ಮಾತ್ರ ಪಾಲ್ಗೊಂಡಿದ್ದರು. […]