ಲಕ್ನೋ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ದೊಡ್ಡ ಆಘಾತ ತಂದಿದೆ. ಗುರುವಾರ ಸಚಿವ ಧರಂ ಸಿಂಗ್ ಸೈನಿ ಅವರು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಉತ್ತರಪ್ರದೇಶ ಸರ್ಕಾರ ಮೂವರು ಸಚಿವರು ರಾಜೀನಾಮೆ ನೀಡಿದಂತಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ತಮಗೆ ನೀಡಿದ್ದ ನಿವಾಸ ಮತ್ತು ಭದ್ರತೆಯನ್ನು ತೊರೆದಿದ್ದರು. ಈ ಸಂದರ್ಭದಲ್ಲಿ ಸೈನಿ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಉತ್ತರಪ್ರದೇಶದಲ್ಲಿ ಕ್ಯಾಬಿನೆಟ್ […]