Friday, 22nd November 2024

ನವವಿವಾಹಿತೆ ಆತ್ಮಹತ್ಯೆ

ದಿಸ್ಪುರ್: ತನ್ನ ಗಂಡನನ್ನು ಬಂಧಿಸುತ್ತಾರೆಂದು ಹೆದರಿ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು. ಅಸ್ಸಾಂ ಸರ್ಕಾರ ಬಾಲ್ಯವಿವಾಹ ವಿರುದ್ಧ ಕಾರ್ಯಾಚರಣೆ ನಡೆಸಿ ಸಾವಿರಾರು ಮಂದಿಯನ್ನು ಬಂಧಿಸಿದ್ದರು. ಈ ಕುರಿತು ತನ್ನ ಪತಿಯನ್ನು ಬಂಧಿಸುತ್ತಾರೆ ಎಂದು ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಈ ಹಿನ್ನಲೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮುಂದೆ ಓದಿ

‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗೆ ಅರ್ಧ ದಿನ ರಜೆ

ಡಿಸ್ಪುರ್ : ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ ಮಾಡಿದ್ದಾರೆ. 1990ರ ದಶಕದಲ್ಲಿ ಕಾಶ್ಮೀರಿ...

ಮುಂದೆ ಓದಿ