ಮುಂಬೈ: ದೇಶೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳ ಜೊತೆ ಬಹುಮಾನ ಮೊತ್ತ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ. ಈ ಮೂಲಕ ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರನ್ನು ಪ್ರೋತ್ಸಾಹಿಸಲು ಬಿಸಿಸಿಐ ಮುಂದಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶೀಘ್ರದಲ್ಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಮುಂಬರುವ ಐಸಿಸಿ ಚುನಾವಣೆಯಲ್ಲಿ ಜಯ್ ಶಾ ಸ್ಪರ್ಧಿಸಲಿದ್ದು, ಈ ಮೂಲಕ ವಿಶ್ವ ಕ್ರಿಕೆಟ್ನ ಮುಖ್ಯಸ್ಥರಾಗುವ ಹಂಬಲದಲ್ಲಿದ್ದಾರೆ. […]