ಮುಂಬೈ : ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ಪ್ರೀತ್ ಸಿಂಗ್ ಅವರನ್ನು ಸೈಬರಾಬಾದ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಾಲ್ವರು ನೈಜೀರಿಯನ್ನರಿಂದ ಮಾದಕವಸ್ತುಗಳನ್ನು ಖರೀದಿಸುತ್ತಿದ್ದ ಆರೋಪದ ಮೇಲೆ ಅಮನ್ಪ್ರೀತ್ ಅವರನ್ನು ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಪೆಡ್ಲರ್ ಗಳಿಂದ 2 ಕೋಟಿ ರೂ.ಗಳ ಮೌಲ್ಯದ 200 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೇ ರೀತಿಯ ಪ್ರಕರಣದಲ್ಲಿ ಸ್ವತಃ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. […]