Sunday, 15th December 2024

ಕಾರ್ಮಿಕರ ವಸತಿ ಕಟ್ಟಡದಲ್ಲಿ ಅಗ್ನಿ ಅವಗಢ: ಓರ್ವ ಸಜೀವ ದಹನ

ಥಾಣೆ: ಪೂರ್ವ ದೊಂಬಿವಿಲಿಯ ವಸತಿ ಸಂಕೀರ್ಣದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿ ಓರ್ವ ವ್ಯಕ್ತಿ ಸಜೀವ ದಹನಗೊಂಡಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ. ಭಾನುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅನಾಹುತದಿಂದ 120 ಮನೆಗಳು ಸಂಪೂರ್ಣ ಸುಟ್ಟುಹೋಗಿವೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಅಡುಗೆ ಮಾಡುವ ಸಮಯದಲ್ಲಿ ಅನಿಲ ಸೋರಿಕೆ ಸಂಭವಿಸಿದ್ದು, ಇತರ ಕೋಣೆಗಳಿಗೆ ವ್ಯಾಪಿಸಿದೆ. ಎರಡು ಅಗ್ನಿಶಾಮಕ ವಾಹನಗಳು ಎರಡು ಗಂಟೆಗಳ ಕಾಲ ಬೆಂಕಿ ನಂದಿಸಲು ಹೋರಾಡಿವೆ. ಶ್ರವಣದೋಷದ ಮೃತ ಕಾರ್ಮಿಕನಿಗೆ 25 ವರ್ಷ ವಯಸ್ಸಾಗಿತ್ತು. […]

ಮುಂದೆ ಓದಿ