ನವದೆಹಲಿ: ದೇಶಾದ್ಯಂತ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜ್ ಗಳಲ್ಲಿ ಸೆಪ್ಟೆಂಬರ್ 30ರೊಳಗೆ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ (ಯುಜಿಸಿ) ಹೊಸ ಮಾರ್ಗಸೂಚಿ ತಿಳಿಸಿದೆ. ಸಿಬಿಎಸ್ಇ, ಐಸಿಎಸ್ ಇ ಮತ್ತು ಎಲ್ಲಾ ರಾಜ್ಯಗಳ ಬೋರ್ಡ್ ಗಳು ಫಲಿತಾಂಶ ಪ್ರಕಟಣೆ ನಂತರವಷ್ಟೇ ಪದವಿ ತರಗತಿಗಳ ದಾಖಲಾತಿ ಪ್ರಕ್ರಿಯೆ ಆರಂಭಿಸು ವಂತೆ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಸೂಚಿಸಿದೆ. ಬೋಧನೆ-ಕಲಿಕೆಯ ಪ್ರಕ್ರಿಯೆಯು ಆಫ್ಲೈನ್, ಆನ್ಲೈನ್ ಅಥವಾ ಸಂಯೋಜಿತ ಕ್ರಮದಲ್ಲಿ ಮುಂದುವರಿಯ ಬೇಕು […]