ಕೀವ್: ರಷ್ಯಾ ಆಕ್ರಮಣಕ್ಕೆ ಬೆದರಿ ತಟಸ್ಥ ನಿಲುವು ತಾಳುವ ಮೂಲಕ ಉಕ್ರೇನ್, ನ್ಯಾಟೋ ಸದಸ್ಯತ್ವ ಪಡೆದುಕೊಳ್ಳುವ ತನ್ನ ಉದ್ದೇಶದಿಂದ ಹಿಂದೆ ಸರಿದಿದೆ. ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಚರ್ಚೆಯ ನಂತರ ಉಕ್ರೇನ್ ರಾಜಧಾನಿ ಕೀವ್ ಮತ್ತು ಚೆರ್ನಿಹಿವ್ ಬಳಿ ಮಿಲಿಟರಿ ಚಟುವಟಿಕೆ ಯನ್ನು ಕಡಿಮೆ ಮಾಡುವುದಾಗಿ ಮಾಸ್ಕೋ ಹೇಳಿದೆ. ಆ ಮೂಲಕ ಮಂಗಳವಾರ ನಡೆದ ಸಂಧಾನ ಮಾತುಕತೆಯು ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ. ಉಕ್ರೇನ್‌ನ ಕೀವ್ ಮತ್ತು ಚೆರ್ನಿಹಿವ್ ಸುತ್ತಮುತ್ತಲಿನ ಮಿಲಿಟರಿ ಚಟುವಟಿಕೆಯನ್ನು ತೀವ್ರವಾಗಿ ಕಡಿತಗೊಳಿಸಲು ರಷ್ಯಾ ನಿರ್ಧರಿಸಿದೆ ಎಂದು ಇಸ್ತಾನ್‌ಬುಲ್‌ನಲ್ಲಿ […]