ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ (Scandal) ಸಂಬಂಧ ಸಿಐಡಿ ವಿಚಾರಣೆ (CID interrogation) ಎದುರಿಸಿದ್ದ ಮಹಿಳಾ ಉದ್ಯಮಿಯೊಬ್ಬರು (Woman Entrepreneur) ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ ಎಂದು ಅವರು ತಮ್ಮ ಡೆತ್ನೋಟ್ನಲ್ಲಿ (Death note) ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಪದ್ಮನಾಭನಗರದ ರಾಘವೇಂದ್ರ ಲೇಔಟ್ ನಿವಾಸಿ ಜೀವಾ (33) ಆತ್ಮಹತ್ಯೆಗೆ ಶರಣಾದವರು. ಶುಕ್ರವಾರ ಮುಂಜಾನೆ ಸುಮಾರು 5.30ಕ್ಕೆ ಈ ಘಟನೆ ನಡೆದಿದೆ. ಕುಟುಂಬದ ಸದಸ್ಯರು ನೋಡಿದಾಗ […]