ನವದೆಹಲಿ: ಸಿಆರ್’ಪಿಎಫ್, ಬಿಎಸ್‌ಎಫ್ ಮತ್ತು ಸಿಐಎಸ್‌ಎಫ್ ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್’ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆ.20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ ಭಾನುವಾರ ತಿಳಿಸಿದೆ. ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್’ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಇಂತಹ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಕಳೆದ ವರ್ಷ ಏಪ್ರಿಲ್ […]