ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ (New Year Celebration) ಹಿನ್ನೆಲೆಯಲ್ಲಿ ಮದ್ಯದ ಹೊಳೆಯೇ ಹರಿದಿದ್ದು, ಅಬಕಾರಿ ಇಲಾಖೆಗೆ (excise department) ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್ಬಿಸಿಎಲ್ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ (Liquor Sales) ಮಾರಾಟವಾಗಿದೆ. ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ […]