ಚೆನ್ನೈ: ತಮಿಳುನಾಡಿನ (Tamil Nadu) ದಿಂಡಿಗಲ್‌ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ (Hospital Fire Tragedy) ಸಂಭವಿಸಿದ್ದು ಕನಿಷ್ಠ 7 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ ಘಟನೆ ಸಂಭವಿಸಿದೆ. ಆಸ್ಪತ್ರೆಯ ನೆಲ ಮಹಡಿಯಲ್ಲಿನ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಅದು ಇಡೀ ಆಸ್ಪತ್ರೆಯನ್ನು ವ್ಯಾಪಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮತ್ತು ರಕ್ಷಣಾ […]