ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ (Gauri Lankesh Murder Case) ಪ್ರಕರಣದಲ್ಲಿ ಜೈಲಿನಲ್ಲಿದ್ದ ಕೊನೆಯ ಆರೋಪಿಗೂ ಜಾಮೀನು (Bail) ನೀಡಲಾಗಿದೆ. 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್‌ಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಬುಧವಾರ ಜಾಮೀನು ನೀಡಿದ್ದು, ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನು ಸಿಕ್ಕಂತಾಗಿದೆ. ಮಹಾರಾಷ್ಟ್ರದ ಶರದ್ ಬಾಹುಸಾಹೇಬ್ ಕಾಲಸ್ಕರ್ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ […]