ಬೆಂಗಳೂರು: ಪುರಾಣ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವಕ್ಕೆ ಸಿದ್ಧವಾಗುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯ ಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಸಿದ್ಧತೆ ಸಭೆ ನಡೆಯಿತು. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 24 ರಿಂದ 28 ರವರೆಗೆ […]