Monday, 16th September 2024

 ಬಸ್ -ಟ್ರಕ್ ಭೀಕರ ಅಪಘಾತ: 12 ಮಂದಿ ಸಾವು

ದಿಸ್ಪುರ್: ಅಸ್ಸಾಂನ ಗೋಲಾಘಾಟ್‍ನಲ್ಲಿ ಸಂಭವಿಸಿದ ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ 12 ಮಂದಿ ಸಾವಿಗೀಡಾಗಿ, 25 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಬೆಳಿಗ್ಗೆ ಅಪಘಾತ ಸಂಭವಿಸಿದೆ. ಬಸ್ ತಿಲಿಂಗ ಮಂದಿರದ ಕಡೆಗೆ ಹೊರಟಿತ್ತು. ಈ ವೇಳೆ ಬಲಿಜನ್ ಪ್ರದೇಶದ ಬಳಿ ಬಸ್ ಟ್ರಕ್‍ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆ. ಘಟನೆಯ ಬಳಿಕ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ […]

ಮುಂದೆ ಓದಿ