ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಚಿನ್ನ ಕಳ್ಳಸಾಗಣೆ ದಂಧೆಯನ್ನು ಭೇದಿಸಿದೆ. ಯುಎಇಯಿಂದ ಮುಂಬೈಗೆ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಒಟ್ಟು 18 ಮಂದಿ ಸೂಡಾನ್ ಮಹಿಳೆಯರು ಹಾಗೂ ಓರ್ವ ಭಾರತೀಯ ಮಹಿಳೆ ಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹ 10.16 ಕೋಟಿ ಮೌಲ್ಯದ ಪೇಸ್ಟ್ ರೂಪದಲ್ಲಿದ್ದ 16.36 ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂರು ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದ ಸಿಂಡಿಕೇಟ್‌ನ ಭಾಗ ಎಂದು ಶಂಕಿಸಲಾದ ಮಹಿಳಾ ಪ್ರಯಾಣಿಕ […]