ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ನಾನು ಕೆಳಜಾತಿಯವನೆಂಬ ಕಾರಣದಿಂದ ನನಗೆ ಆರ್‌ಎಸ್‌ಎಸ್ ಸಂಸ್ಥಾಪಕ ಹೆಗಡೆವಾರ್ ಮ್ಯೂಸಿಯಂಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅಸಮಧಾನ ಹೊರಹಾಕಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಕಳಿಸಿರುವ ಆಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಹಿಂದುತ್ವ, ಹಿಂದೂ ದೇವರಲ್ಲಿ ಅತ್ಯಂತ ವಿಶ್ವಾಸ ಮತ್ತು ನಂಬಿಕೆಯಿರುವ ನಾನು ನಾಗಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದೆ. […]