Monday, 16th September 2024

ದುರ್ಗಾಪೂಜೆ ವೇಳೆ ಕಾಲ್ತುಳಿತ: ಮೂವರ ಸಾವು

ಗೋಪಾಲ್​ಗಂಜ್: ನವರಾತ್ರಿ ಹಿನ್ನೆಲೆ ದುರ್ಗಾ ಪೂಜೆ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಗು ಮತ್ತು ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಮೃತರನ್ನು ಆಶ್​ಕುಮಾರ್​(5), ಊರ್ಮಿಳಾ ದೇವಿ, ಶಾಂತಿ ದೇವಿ ಎಂದು ಗುರುತಿಸಲಾಗಿದೆ. ಗೋಪಾಲ್​ಗಂಜ್​ನಲ್ಲಿ ದುರ್ಗಾ ಪೂಜೆ ಹಮ್ಮಿಕೊಳ್ಳಲಾಗಿತ್ತು. ದುರ್ಗಾ ಪೂಜೆಗೆ ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡಳಿತ ಮಂಡಳಿ […]

ಮುಂದೆ ಓದಿ