ನವದೆಹಲಿ: ಮಹಿಳೆಯರ ಕುರಿತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್ ಆಮ್ ಆದ್ಮಿ ಪಕ್ಷದ ಸಂಚಾಲಕ ಗೋಪಾಲ್ ಇಟಾಲಿಯಾ ಅವರನ್ನು ಗುರುವಾರ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿರುವ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಗೋಪಾಲ್ ಬೆಳಿಗ್ಗೆ ವಿಚಾರಣೆಗೆ ಹಾಜರಾಗಿದ್ದರು. ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರ ಆದೇಶದ ಮೇಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನ್ಯಾಯಾಧೀಶರ ಮುಂದೆ ಗೋಪಾಲ್ ಅವರನ್ನು ಹಾಜರುಪಡಿಸಿ ಬಂಧನಕ್ಕೆ ಒಳಪಡಿಸ ಬಹುದು ಎನ್ನಲಾಗಿದೆ. […]