ಚಂಡೀಗಢ: ರಾಜ್ಯದ ಕಪುರ್ತಲಾ ಜಿಲ್ಲೆಯಲ್ಲಿ ನಿಹಾಂಗ್ ಗುಂಪಿನ ಸದಸ್ಯರು ಗುಂಡು ಹಾರಿಸಿದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ ಮೃತಪಟ್ಟಿದ್ದು, ಇಬ್ಬರು ಇತರೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುರುದ್ವಾರದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಸುಲ್ತಾನ್‌ಪುರ ಲೋಧಿಯಲ್ಲಿ ನಿಹಾಂಗ್ ಗುಂಪಿನ ಕೆಲವು ಸದಸ್ಯರ ವಿರುದ್ಧ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲು ಹೋದಾಗ ಈ ಘಟನೆ ನಡೆದಿದೆ. ಪೊಲೀಸರು ರಸ್ತೆಯಲ್ಲಿ ನಿಂತಿದ್ದಾಗ ನಿಹಾಂಗ್‌ಗಳು ಗುಂಡು ಹಾರಿಸಿದ್ದಾರೆ. ಒಬ್ಬ ಕಾನ್‌ಸ್ಟೆಬಲ್ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡರು ಎಂದು ಕಪುರ್ತಲಾ ಪೊಲೀಸ್ ವರಿಷ್ಠಾಧಿಕಾರಿ […]