ವಿಜಯನಗರ: ಜಿಲ್ಲೆಯ ಹಂಪಿಯ ಭವ್ಯ ಇತಿಹಾಸವನ್ನು ಹೇಳುವ ಹಂಪಿ ಉತ್ಸವ ಫೆಬ್ರವರಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವದ ಲಾಂಛನ ಬಿಡುಗಡೆ ಮಾಡಿದರು. ಬರ ಪರಿಸ್ಥಿತಿ ಹಿನ್ನಲೆಯಲ್ಲಿ ನವೆಂಬರ್‌ನಲ್ಲಿ ನಡೆಯಬೇಕಿದ್ದ ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ವಿಜಯ ನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಮಹದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಂಪಿಯಲ್ಲಿ ಫೆಬ್ರವರಿ 2, 3 ಮತ್ತು 4ರಂದು ಹಂಪಿ ಉತ್ಸವ ನಡೆಯಲಿದೆ. ಯುನೆಸ್ಕೋ ಪಾರಂಪರಿಕ […]