ಜೈಪುರ: ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿಯೊಬ್ಬರು ತಮ್ಮ ನಂಬಿಕೆಯನ್ನು ಅನುಸರಿಸುವುದು ಕಷ್ಟ. ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಕೂಡ ಅಪರಾಧವಾಗುತ್ತದೆ ಎಂದು ಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ದೇಶದಾದ್ಯಂತ ಹನುಮ ಜಯಂತಿಯನ್ನು ಆಚರಿಸುತ್ತಿದ್ದು, ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ವ್ಯಕ್ತಿಯೊಬ್ಬರು ತಮ್ಮ ನಂಬಿಕೆಯನ್ನು ಅನುಸರಿಸುವುದು ಸಹ ಕಷ್ಟವಾಗಿರುತ್ತದೆ ಮತ್ತು ಜನರ ಸಂಪತ್ತನ್ನು ಕಿತ್ತು ಕೊಂಡು ‘ಆಯ್ದ’ ಜನರಿಗೆ ಹಂಚಲು ಆಳವಾದ ಸಂಚು ರೂಪಿಸುತ್ತಿದೆ […]