Wednesday, 11th December 2024

ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳು ನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಿಳುನಾಡು ಸಿಎಂ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸಿಎಂ ಕಚೇರಿಯ ಮೂಲಗಳು ತಿಳಿಸಿವೆ. ಏ.6ರಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಡಳಿತಾರೂಡ ಎಐಎಡಿಎಂಕೆ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಮತಬೇಟೆಯನ್ನು ಸಿಎಂ ಪಳನಿಸ್ವಾಮಿ ನಡೆಸಿದ್ದರು. ಇಂತಹ ಚುನಾವಣಾ ಮತದಾನದ ಮತ ಏಣಿಕೆ ಕಾರ್ಯ ಮೇ.2ರಂದು ನಡೆಯಲಿದೆ.

ಮುಂದೆ ಓದಿ