ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ಶೀಘ್ರವೇ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ […]