ಅಸ್ಸಾಂ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ಪಾಕಿಸ್ತಾನದಲ್ಲಿ ಚುನಾವಣೆ ಗೆಲ್ಲುವ ತಯಾರಿ ಮಾಡಿದಂತಿದೆ. ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿಯಾಗಲು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಭಾರತಕ್ಕಿಂತ ಪಾಕಿಸ್ತಾನದ ಹಿತಾಸಕ್ತಿಗಳೊಂದಿಗೆ ಹೆಚ್ಚು ಹೊಂದಿಕೆಯಾಗಿದೆ. ಕಾಂಗ್ರೆಸ್ ಪಕ್ಷವು ಪಾಕಿಸ್ತಾನದಲ್ಲಿ ಚುನಾವಣೆ ಗೆಲ್ಲುವ ರೀತಿಯಲ್ಲಿ ಸಿದ್ಧವಾಗಿದೆ. ನಾವು ಪ್ರಣಾಳಿಕೆಯನ್ನು ಓದಿದ್ದೇವೆ ಮತ್ತು ಓದಿದ ಅನಂತರ ಈ ಪ್ರಣಾಳಿಕೆಯು […]