ಕರಾಚಿ: ಮಾಜಿ ಆಲ್‌ರೌಂಡರ್ ಯಾಸಿರ್ ಅರಾಫತ್ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ‘ಹೈ ಪರ್ಫಾರ್ಮೆನ್ಸ್ ‘ ಕೋಚ್ ಆಗಿ ಪಾಕ್ ಕ್ರಿಕೆಟ್ ಮಂಡಳಿ ನೇಮಿಸಿದೆ. ನ್ಯೂಜಿಲೆಂಡ್‌ನಲ್ಲಿ ನಡೆಯುವ ಟಿ20 ಸರಣಿಗೆ 17 ಸದಸ್ಯರ ಪಾಕ್ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಸರಣಿಯು ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಪಾಕ್ ಪಾಲಿಗೆ ಪೂರ್ವಸಿದ್ಧತೆಯಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಗೆ ಪಾಕಿಸ್ತಾನ ತಂಡದ ಹೈ ಪರ್ಫಾರ್ಮೆನ್ಸ್ ಪ್ರದರ್ಶನದ […]