ನವದೆಹಲಿ : ಆರೋಗ್ಯ ಕಾರ್ಯಕರ್ತರ ಮೇಲಿನ ಹಲ್ಲೆಗಳ ವಿರುದ್ಧ ಭಾರತೀಯ ವೈದ್ಯಕೀಯ ಸಂಘ(ಐಎಂಎ)ವು ‘ಸೇವ್ ದ ಸೇವಿಯರ್'(ರಕ್ಷಕನನ್ನು ರಕ್ಷಿಸಿ) ಎಂಬ ಘೋಷವಾಕ್ಯದೊಂದಿಗೆ ಜೂ. 18 ರಂದು ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಭಟನೆಗಾಗಿ ಯಾವುದೇ ಆಸ್ಪತ್ರೆಗಳನ್ನು ಮುಚ್ಚಲಾಗುವುದಿಲ್ಲ. ಬದಲಿಗೆ ಕರ್ತವ್ಯಕ್ಕೆ ಹಾಜರಾಗುವ ವೈದ್ಯರು ಕಪ್ಪು ಬ್ಯಾಡ್ಜ್, ಕಪ್ಪು ಮಾಸ್ಕ್ ಅಥವಾ ಕಪ್ಪು ಅಂಗಿ ತೊಟ್ಟು ತಮ್ಮ ವಿರೋಧವನ್ನು ಸೂಚಿಸಲಿದ್ದಾರೆ ಎಂದು ಐಎಂಎ ಅಧ್ಯಕ್ಷ ಡಾ. ಜೆ.ಎ.ಜಯಲಾಲ್ ಹೇಳಿದ್ದಾರೆ. ಕೋವಿಡ್ ವಾರ್ಡ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, […]