Tuesday, 27th July 2021

ಮಾಲ್ಡಾ ಗಡಿಯಲ್ಲಿ ಚೀನಾ ಪ್ರಜೆಯ ಬಂಧನ

ನವದೆಹಲಿ: ಭಾರತ-ಬಾಂಗ್ಲಾದೇಶ ಗಡಿಭಾಗದಲ್ಲಿ ಚೀನಾ ಪ್ರಜೆಯನ್ನು ಗಡಿ ಭದ್ರತಾ ಪಡೆ ಗುರುವಾರ ಬಂಧಿಸಿದೆ. ಅನುಮಾನಾಸ್ಪದ ಚಟುವಟಿಕೆಯ ಹಿನ್ನೆಲೆಯಲ್ಲಿ ಚೀನಾ ಪ್ರಜೆಯನ್ನು ಪಶ್ಚಿಮಬಂಗಾಳದ ಮಾಲ್ಡಾ ಜಿಲ್ಲೆ ಸಮೀಪದ ಗಡಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದೆ. ಬಂಧಿತ ವ್ಯಕ್ತಿಯಿಂದ ಲ್ಯಾಪ್ ಟಾಪ್ ಮತ್ತು ಪಾಸ್ ಪೋರ್ಟ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ಯಾರಾಮಿಲಿಟರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ಬಂಧಿತ ಚೀನಾ ಪ್ರಜೆಯ ಹೆಸರು ಮತ್ತು ವಿವರಗಳನ್ನು ಬಹಿರಂಗಪಡಿಸಲು ಬಿಎಸ್ ಎಫ್ ಹಿರಿಯ ಅಧಿಕಾರಿಗಳು ನಿರಾಕರಿಸಿ ದ್ದಾರೆ.

ಮುಂದೆ ಓದಿ