ನವದೆಹಲಿ: ಭಾರತದ ಭೂಪಟವನ್ನು ತಪ್ಪಾಗಿ ತೋರಿಸುವ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ವಾಟ್ಸ್ ಆಯಪ್, ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರ ಎಚ್ಚರಿಕೆಯ ನಂತರ ಅದನ್ನು ಡಿಲಿಟ್ ಮಾಡಿದೆ. ತಪ್ಪಿಗೆ ಕ್ಷಮೆ ಯನ್ನೂ ಕೋರಿದೆ. ಮೆಟಾ (ಫೇಸ್‌ಬುಕ್‌ನ ಮಾಲೀಕ ಸಂಸ್ಥೆ) ಮಾಲೀಕತ್ವದ ಮೆಸೇಜಿಂಗ್ ಆಯಪ್ ಹೊಸ ವರ್ಷದ ಹಿನ್ನೆಲೆಯಲ್ಲಿ ವಿಡಿಯೊ ವೊಂದನ್ನು ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಹಂಚಿಕೊಂಡಿತ್ತು. ಇದರಲ್ಲಿ ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸ ಲಾಗಿತ್ತು. ಇದನ್ನು ಗಮನಿಸಿದ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದರು. ‘ಆತ್ಮೀಯ […]