ನವದೆಹಲಿ: ರಾಧಾಕೃಷ್ಣನ್ ನಾಯರ್ ರನ್ನು ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ(ಎಎಫ್ಐ), ಭಾರತ ಅಥ್ಲೆಟಿಕ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಿದೆ. ಇದಕ್ಕೆ ಭಾರತ ಕ್ರೀಡಾ ಪ್ರಾಧಿಕಾರ ಅನುಮೋದನೆ ನೀಡಿದೆ. ತಂಡದ ಮಾಜಿ ತರಬೇತುದಾರ ಬಹದ್ದೂರ್ ಸಿಂಗ್ ಈ ವರ್ಷದ ಜುಲೈನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದಾಗಿನಿಂದ 62 ವರ್ಷದ ರಾಧಾಕೃಷ್ಣನ್ ಮುಖ್ಯ ಕೋಚ್ ಆಗಿದ್ದಾರೆ. ಹೊಸ ತರಬೇತುದಾರರು ಭಾರತೀಯ ಅಥ್ಲೆಟಿಕ್ಸ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ಎಎಫ್ಐ ಅಧ್ಯಕ್ಷ ಆದಿಲ್ ಜೆ.ಸುಮರಿವಾಲಾ ವಿಶ್ವಾಸ ವ್ಯಕ್ತಪಡಿಸಿದರು.