ನವಿಮುಂಬೈ: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಶುಕ್ರವಾರ ಆಸ್ಟ್ರೇಲಿಯಾ ಎದುರಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಪ್ರವಾಸಿ ಆಸ್ಟ್ರೇಲಿಯಾ ಎದುರಿನ ಏಕೈಕ ಟೆಸ್ಟ್‌ನಲ್ಲಿ ಭಾರತವು ಗೆದ್ದಿತ್ತು. ನಂತರ ಏಕದಿನ ಸರಣಿಯಲ್ಲಿ 0-3ರಿಂದ ಸೋತಿತ್ತು. ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್‌ನಿಂದಾಗಿ ಹರ್ಮನ್ ಬಳಗವು ಸೋತಿತ್ತು. ಮೂರನೇ ಪಂದ್ಯದಲ್ಲಿ ಭಾರತ ತಂಡದ ಬೌಲರ್ ಗಳನ್ನು ದಂಡಿಸಿದ್ದ ಆಸ್ಟ್ರೇಲಿಯಾ ಬ್ಯಾಟರ್‌ಗಳು 338 ರನ್‌ಗಳ ಬೃಹತ್ ಗುರಿ ಒಡ್ಡಿದ್ದರು. ಆ ಪಂದ್ಯದಲ್ಲಿ ಭಾರತ 190 […]