ನವದೆಹಲಿ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ವೆಬ್ಸೈಟ್ನಲ್ಲಿ ಗುರುವಾರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಬಳಕೆದಾರರು ಸುಮಾರು ಎರಡು ಗಂಟೆಗಳ ಕಾಲ ಇ-ಟಿಕೆಟ್ ಕಾಯ್ದಿರಿಸಲು ಸಾಧ್ಯ ವಾಗಲಿಲ್ಲ. ಮಧ್ಯಾಹ್ನ ಈ ಬಗ್ಗೆ ಐಆರ್ಸಿಟಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಾಂತ್ರಿಕ ಅಡಚಣೆ ಉಂಟಾಗಿರುವುದನ್ನು ಒಪ್ಪಿಕೊಂಡಿದೆ. ತತ್ಕಾಲ್ ಅಥವಾ ಸಾಮಾನ್ಯ ಕೋಟಾದಡಿ ಟಿಕೆಟ್ ಪಡೆಯಲು ಸಾಧ್ಯವಾಗದೇ ಗ್ರಾಹಕರು ಸಾಮಾಜಿಕ ಮಾಧ್ಯಮದಲ್ಲಿ ಅಸಮಾ ಧಾನ ವ್ಯಕ್ತಪಡಿಸಿದರು. ಐಆರ್ಸಿಟಿಸಿ ವೆಬ್ಸೈಟ್ ಮತ್ತು ಅದರ ಮೊಬೈಲ್ ಅಪ್ಲಿಕೇಶನ್ ಎರಡರಲ್ಲೂ ಲಾಗಿನ್ […]