ಕೋಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಈ ವರದಿಯು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರ ನೇತೃತ್ವದಲ್ಲಿ ‘ಸರ್ವಪಕ್ಷ ಸರ್ಕಾರ’ ರಚನೆ ಮಾಡುವ ನಿರ್ಧಾರಕ್ಕೆ ಬಲ ಬಂದಿದೆ. ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮಹಿಂದಾ ರಾಜಪಕ್ಸ ಅವರ ಬಳಿಕ ಮನವಿ ಮಾಡಿ ದ್ದರು. ಇದಕ್ಕೆ ರಾಜಪಕ್ಸ ಸಮ್ಮತಿ ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೇಶದ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ […]