ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ ಇವಾನಾ ಟ್ರಂಪ್ (73) ನಿಧನರಾಗಿದ್ದಾರೆ. ನ್ಯೂಯಾರ್ಕ್ ನಗರದ ತಮ್ಮ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು, ಗುರುವಾರ ಇವಾನಾ ಟ್ರಂಪ್ ಅವರು ಕೊನೆಯುಸಿ ರೆಳೆದಿದ್ದಾರೆ. ಈ ಕುರಿತ ಮಾಹಿತಿಯನ್ನು ಡೊನಾಲ್ಡ್ ಟ್ರಂಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಕೆ ಅದ್ಭುತ, ಸುಂದರ ಮಹಿಳೆ. ಅವಳ ಮೂವರು ಮಕ್ಕಳಾದ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್. ಅವಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ ಇತ್ತು. ಅವರು ತಮ್ಮ ಮಕ್ಕಳಿಗೆ ತಾಳ್ಮೆ ಮತ್ತು […]