Monday, 14th October 2024

ಇಂದು ಮೈಸೂರಿನಲ್ಲಿ ಜಂಬೂಸವಾರಿ

ಮೈಸೂರು: ವಿಜಯದಶಮಿ ಪ್ರಯುಕ್ತ ಅರಮನೆ ಆವರಣದಲ್ಲಿ ಬೆಳಗ್ಗೆಯಿಂದಲೇ ಪೂಜೆ ಕೈಂಕರ್ಯಗಳು ಆರಂಭಗೊಂಡಿದೆ. 9 ಗಂಟೆಗೆ ಅಂಬಾ ವಿಲಾಸದಲ್ಲಿ ವಜ್ರಮುಷ್ಠಿ ಕಾಳಗ ಶುರುವಾಗಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಖಾಸಗಿ ದರ್ಬಾರ್ ಶರನ್ನವರಾತ್ರಿಯ ಒಟ್ಟೂ 9 ದಿನಗಳ ಕಾಲ ನಡೆಯಲಿದೆ. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಗುತ್ತಿದೆ. ಇಂದು ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಬೆಳ್ಳಿರಥದಲ್ಲಿ ಜನಪದ ಕಲಾತಂಡಗಳ ಜೊತೆಗೆ ಅರಮನೆಯತ್ತ ಹೊರಟಿದೆ. ಮೆರವಣಿಗೆ ವೇಳೆ […]

ಮುಂದೆ ಓದಿ