ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಸೀದಿಗೆ ನುಗ್ಗಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ನಗರದ ಗಂಟ್ಮುಲ್ಲಾ ಬಾರಾಮುಲ್ಲಾ ಪ್ರದೇಶದ ಮಸೀದಿಯಲ್ಲಿ ಮೊಹಮ್ಮದ್ ಶಫಿ ಎಂದು ಗುರುತಿಸಲಾದ ನಿವೃತ್ತ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಾರ್ಥನೆ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಪೊಲೀಸರು ಆ ಪ್ರದೇಶವನ್ನು ಸುತ್ತು ವರಿದಿದ್ದು, ಭಯೋತ್ಪಾದಕರ ಶೋಧ ನಡೆಸಿದ್ದಾರೆ. “ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಮಸೀದಿಯಲ್ಲಿ ಆಜಾನ್ ಪ್ರಾರ್ಥನೆ ಮಾಡುತ್ತಿದ್ದಾಗ […]