ವಿಜಯವಾಡ: ಕರ್ನಾಟಕ ಮಾಜಿ ಸಚಿವ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ.ಶಾಂತಾ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರ್ಪಡೆ ಯಾಗಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಸಮ್ಮುಖದಲ್ಲಿ ವಿಜಯವಾಡದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ವಿಜಯವಾಡದ ತಾಡಿಪಲ್ಲಿ ಸಿಎಂ ಕ್ಯಾಂಪ್ ಆಫೀಸ್ನಲ್ಲಿ ಪಕ್ಷ ಸೇರ್ಪಡೆಯಾದರು. ಶಾಂತಾ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದೂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾಂತಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದೂ ಪುರ ಲೋಕಸಭಾ ಕ್ಷೇತ್ರದಲ್ಲಿ ವೈಎಸ್ಆರ್ […]