ಮುಂಬೈ: ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ವಿವಾದಾತ್ಮಕ ಪೋಸ್ಟರ್ ಪ್ರಕರಣದಲ್ಲಿ ನಿರ್ದೇಶಕಿ ಲೀನಾ ಮಣಿಮೇಕಲೈ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಕಾಳಿ ದೇವಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ತಮ್ಮ ಮುಂಬರುವ ಸಾಕ್ಷ್ಯಚಿತ್ರದ ವಿವಾದಾತ್ಮಕ ಪೋಸ್ಟರ್‌ಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್ ಗಳಿಗೆ ಸಂಬಂಧಿಸಿದಂತೆ ಲೀನಾ ಮಣಿಮೇಕಲೈ ಅವರ ಮೇಲೆ ಬಲವಂತದ ಕ್ರಮ ಕೈಗೊಳ್ಳದಂತೆ ಸರ್ವೋಚ್ಛ ನ್ಯಾಯಾಲಯ ಮಧ್ಯಂತರ ರಕ್ಷಣೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠವು […]