ನವದೆಹಲಿ: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಡಾ.ಕಫೀಲ್ ಖಾನ್ ಬಂಧನದ ಆದೇಶವನ್ನು ರದ್ದುಪಡಿಸಿರುವ ಅಲಹಾ ಬಾದ್ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸೆಪ್ಟಂಬರ್ 1 ರಂದು ಹೈಕೋರ್ಟ್ ನೀಡಿರುವ ಆದೇಶದಲ್ಲಿ ಖಾನ್ ಬಂಧನ ಆದೇಶವನ್ನು ರದ್ದುಪಡಿಸಿದ್ದು, ಈ ಆದೇಶದಲ್ಲಿ ಮಧ್ಯಪ್ರವೇಶಿಸುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಹಾಗೂ ಜಸ್ಟಿಸ್‌ಗಳಾದ ಎ.ಎಸ್.ಬೋಪಣ್ಣ ಹಾಗೂ ವಿ.ರಾಮಸುಬ್ರಹ್ಮಣ್ಯಂ ಅವರಿದ್ದ ಮೂವರು ಸದಸ್ಯರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ. ಮಧ್ಯಪ್ರವೇಶಿಸಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ತಿಳಿಸಿದ ಸುಪ್ರೀಂಕೋರ್ಟ್ ಉತ್ತರಪ್ರದೇಶ […]