ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ಕಂಠಿ ಸಿನಿಮಾ ನಿರ್ದೇಶಕ ಭರತ್ ಕೊನೆಯುಸಿರೆಳೆದಿದ್ದಾರೆ. ಬಹು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.24ರ ರಾತ್ರಿ ನಿಧನರಾಗಿದ್ದಾರೆ. ಶ್ರೀಮುರುಳಿ ಅಭಿನಯದ ಕಂಠಿ ಹಾಗೂ ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ಸಾಹೇಬ ಚಿತ್ರಕ್ಕೂ ಭರತ್ ನಿರ್ದೇಶನ ಮಾಡಿದ್ದರು. ಭರತ್ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಯುವ ನಿರ್ದೇಶಕನ ಅಕಾಲಿಕ ಮರಣಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದ್ದು, ದುಃಖಿತ ಕುಟುಂಬಕ್ಕೆ […]