ಕರಾಚಿ: ಕರಾಚಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟ ದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ. ವಿಶ್ವವಿದ್ಯಾನಿಲಯದ ಆವರಣದೊಳಗೆ ವಾಣಿಜ್ಯ ಪ್ರಯಾಣಿಕ ವ್ಯಾನ್ ಸ್ಫೋಟಗೊಂಡಿದೆ. ಮೃತಪಟ್ಟವರಲ್ಲಿ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದ್ದಾರೆ. ವರದಿಗಳ ಪ್ರಕಾರ, ವಿಶ್ವವಿದ್ಯಾನಿಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ವ್ಯಾನ್ನಲ್ಲಿ ಸ್ಫೋಟ ಸಂಭವಿಸಿದೆ. ವಿಶ್ವವಿದ್ಯಾಲಯದಲ್ಲಿ ಬೋಧನೆ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಉಪನ್ಯಾಸಕರನ್ನು ವ್ಯಾನ್’ನಲ್ಲಿ ಸಾಗಿಸುತ್ತಿತ್ತು. ಏತನ್ಮಧ್ಯೆ, ವ್ಯಾನ್‌ನಲ್ಲಿ ಏಳರಿಂದ ಎಂಟು ಜನರಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.