ಬೆಂಗಳೂರು: ‘ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಕುರಿತು ಉದ್ಭವವಾಗಿರುವ ಚರ್ಚೆಗೆ ಸಂಬಂಧಿಸಿ ದಂತೆ ಮಾತನಾಡಿದ ಸಿದ್ದರಾಮಯ್ಯ, ‘ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಹೇಳಿದರು. ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ […]