Sunday, 13th October 2024

ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ: ಡಿಕೆಶಿಗೆ ಬಿಗ್‌ ರಿಲೀಫ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್‌ʼಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಗುರುವಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ವಿಚಾರಣೆ ನಡೆಸಿದ ಪೀಠವು, ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿದ ಅರ್ಜಿಯು ವಿಚಾರಣೆಗೆ ಅರ್ಹವಾಗಿಲ್ಲವೆಂದು ಅರ್ಜಿಯನ್ನು ವಜಾ ಮಾಡಿತು. ರಾಜ್ಯ – ಸಿಬಿಐ ನಡುವಿನ ವಿಚಾದ ಸುಪ್ರೀಂ ಕೋರ್ಟ್‌ ತೀರ್ಮಾನಿಸಬೇಕು, ಹೈಕೋರ್ಟ್‌ ತೀರ್ಮಾನಿಸುವುದು ಸೂಕ್ತವಲ್ಲವೆಂದು ತೀರ್ಪು ನೀಡಿತು.

ಮುಂದೆ ಓದಿ